ಮೇಕೇರಿಯಲ್ಲಿ ನಿವೃತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ – ಸೀಮಂತ ಕಾರ್ಯಕ್ರಮ

Share this post :

ಮಡಿಕೇರಿ : 36 ವರ್ಷ ಕಾಲ ಬಿಳಿಗೇರಿ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದೇವಕಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಮೇಕೇರಿ ಅಂಗನವಾಡಿ ಕೇಂದ್ರದಲ್ಲಿ ನೆರವೇರಿತು.
ಪೋಷಣ್ ಅಭಿಯಾನ ಯೋಜನೆ ಅಡಿ ಸಮುದಾಯ ಆಧಾರಿತ ಚಟುವಟಿಕೆಯಾದ ಸೀಮಂತ ಕಾರ್ಯಕ್ರಮವನ್ನು ಶ್ರೀಮತಿ ಭವ್ಯರವರಿಗೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಪಾಲ್ಗೊಂಡು ಶುಭ ಹಾರೈಸಿದರು. ಪೋಶನ್ ಟ್ರ್ಯಾಕರ್, ಭಾಗ್ಯಲಕ್ಷ್ಮಿ, ಮಾತೃ ವಂದನ, ಭೇಟಿ ಬಚಾವ್ ಭೇಟಿ ಪಡಾವೊ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಮತ್ತು ಇತ್ತೀಚೆಗೆ ರೆಡ್ ಕ್ರಾಸ್ ಸಂಸ್ಥೆಯಿಂದ ಗೌರವ ಸನ್ಮಾನಕ್ಕೆ ಒಳಗಾಗಿದ್ದ ಬಿಳಿಗಿರಿ ಅಂಗನವಾಡಿ ಕಾರ್ಯಕರ್ತೆ ದೇವಕಿಯವರ ಕರ್ತವ್ಯ ಪರತೆ ಬಗ್ಗೆ ಶ್ಲಾಘಿಸಿದರು.
ಮಾತೃಭಾಷಾ ದಿವಸ್ ಕುರಿತು ಮಾತನಾಡಿದ ಅವರು, ನಮ್ಮ ಮಾತೃಭಾಷೆ ನಮ್ಮ ಗುರುತು. ಅದನ್ನು ಉಳಿಸೋಣ ಬೆಳೆಸೋಣ, ಮನೆಯಲ್ಲಿ ತಪ್ಪದೇ ನಮ್ಮ ಮಕ್ಕಳೊಂದಿಗೆ ಮಾತೃಭಾಷೆಯಲ್ಲೇ ಮಾತನಾಡೋಣ. ಮಾತೃಭಾಷೆಯನ್ನು ಮಕ್ಕಳಿಗೆ ಕಲಿಸೋಣ, ನಮ್ಮ ಸಂಸ್ಕೃತಿಯನ್ನ, ಪರಂಪರೆಯನ್ನ ಕಾಪಾಡುವಲ್ಲಿ ಮುಂದಿನ ಪೀಳಿಗೆಯನ್ನು ಬೆಳೆಸುವ ಕರ್ತವ್ಯ ಎಲ್ಲ ತಾಯಂದಿರದಾಗಿದ್ದು ಕೂಡ ಆಗಿದ್ದು ಗರ್ಭದಿಂದಲೇ. ಮಾತೃಭಾಷೆ ಕುರಿತು, ಸಂಸ್ಕೃತಿಯ ಕುರಿತು ಅರಿವು ಮೂಡಿಸಲು ತಾಯಂದಿರೆಯಲ್ಲಿ ಜಾಗೃತಿ ಮೂಡಿಸೋಣ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮೇಕೇರಿ ಗ್ರಾಮಸ್ಥರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಜರಿದ್ದರು.

coorg buzz
coorg buzz