ಹರ್‌ ಮಂದಿರ್‌ ಶಾಲೆಯಲ್ಲಿ ಬೆಂಕಿ ಅವಘಡ – ಗಾಯಾಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಶಾಸಕ ಪೊನ್ನಣ್ಣ

Share this post :

ಮಡಿಕೇರಿ : ಕಾಟಕೇರಿಯ ಹರ್ ಮಂದಿರ್ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಶಾಸಕ ಎ.ಎಸ್.‌ ಪೊನ್ನಣ್ಣ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗಿದ್ದ ಪೊನ್ನಣ್ಣ, ತನ್ನ ಪೂರ್ವ ನಿರ್ಧರಿತ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಮಡಿಕೇರಿಗೆ ಆಗಮಿಸಿದರು. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ, ಮಕ್ಕಳು ಹಾಗೂ ಪೋಷಕರಿಗೆ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಇಲಾಖೆ ತನಿಖೆಯ ವರದಿ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಹೆಚ್ಚಿನ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಬಳಿಕ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚೆಟ್ಟಿಮಾನಿಯ ಮೃತ ಬಾಲಕನ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಪಕ್ಷದ ಪ್ರಮುಖರು ಈ ಸಂದರ್ಭ ಇದ್ದರು.

coorg buzz
coorg buzz