ಮತ್ತೆ ಜೈಲಿಗೆ ʼಗಣಿ ಧಣಿʼ ಶಾಸಕ ಜನಾರ್ದನ ರೆಡ್ಡಿ – ಕಾರಣ ಏನು ಗೊತ್ತಾ..?

Janardhana Reddy

Share this post :

coorg buzz

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಾಲಿ ಶಾಸಕ ಜನಾರ್ಧನ ರೆಡ್ಡಿ (Janardhana Reddy) ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದ್ದು, 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಹೈದರಾಬಾದ್‌ನ ನಾಮಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದು, ಗಣಿ ಧಣಿಗೆ ಮತ್ತೆ ಜೈಲು ಶಿಕ್ಷೆ ಅನುಭವಿಸುವ ಪರಿಸ್ಥಿತಿ ಬಂದೊದಗಿದೆ.
ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ ಅನ್ವಯ ಗಾಲಿ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಬಂಧನವಾಗಿತ್ತು. ಐಪಿಸಿ ಸೆಕ್ಷನ್ 120ಬಿ, 379, 411, 420, 422 ಮತ್ತು 447ರ ಅಡಿಯಲ್ಲಿ ಹಾಗೂ ಗಣಿಗಾರಿಕೆ ಮತ್ತು ಅರಣ್ಯ, ಖನೀಜ ಕಾಯ್ದೆಗಳ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇವರ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಗಾಲಿ ಜನಾರ್ದನ ರೆಡ್ಡಿ ಅವರು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಮತ್ತು ಒಎಂಸಿಯಿಂದ ಅನುಮತಿ ನೀಡಿದ್ದಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಕಬ್ಬಿಣದ ಅದಿರನ್ನು ವಿವೇಚನಾರಹಿತವಾಗಿ ಗಣಿಗಾರಿಕೆ ನಡೆಸಿದೆ ಎಂಬ ಆರೋಪಗಳಿತ್ತು. ಅಕ್ರಮ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಆಂಧ್ರದಲ್ಲಿ ಆರೋಪ ಎದುರಿಸಿದ್ದರು.