ಸೋಮವಾರಪೇಟೆ : ಸಿ ಆಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಸೋಮವಾರಪೇಟೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರೈತ ಹೋರಾಟ ಸಮಿತಿಯು ತಾಲೂಕು ಬಂದ್‌ಗೆ ಕರೆ ನೀಡಿದ್ದು, ಸೋಮವಾರಪೇಟೆ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಇಲ್ಲಿನ ವಿವೇಕಾನಂದ ಸರ್ಕಲ್ ಬಳಿ ಸೇರಿದ ರೈತರು ವಾಹನ ಸಂಚಾರಕ್ಕೆ ತಡೆವೊಡ್ಡಿದರು. ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಅಂಗಡಿ ಮಳಿಗೆಗಳು ಬಂದ್ ಆಗಿವೆ.
ಪ್ರತಿಭಟನೆ ವೇಳೆ ತಹಸೀಲ್ದಾರ್ ಕೃಷ್ಣಮೂರ್ತಿ, ಆರ್‌ಎಫ್‌ಒ ಶೈಲೇಂದ್ರ ಅವರನ್ನು ಸುತ್ತುವರೆದು ಆಕ್ರೋಶ ಹೊರಹಾಕಿದರು. ಜಿಲ್ಲಾಧಿಕಾರಿ ಹಾಗೂ ಸಿಸಿಎಫ್ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು. ಗ್ರಾಮೀಣ ಭಾಗದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾಎರ್ವಜನಿಕರು ಆಗಮಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.



