ಬಿಗ್‌ಬಾಸ್‌ಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ – 12ನೇ ಆವೃತ್ತಿಯ ದೊಡ್ಡ ಮನೆಗೆ ಬೀಗ ಜಡಿದ ಜಿಲ್ಲಾಡಳಿತ..!

Share this post :

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್ 12ನೇ ಆವೃತ್ತಿ‌ ಆರಂಭವಾದ ಎರಡನೇ ವಾರದಲ್ಲೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ರಾಮನಗರ ತಹಶೀಲ್ದರ್ ತೇಜಸ್ವಿನಿ ಸಮ್ಮುಖದಲ್ಲಿ ಇಂದು ಸಂಜೆ ಆಗಮಿಸಿದ ಅಧಿಕಾರಿಗಳು ಪೊಲೀಸ್‌ ಭದ್ರತೆಯಲ್ಲಿ ಬೀಗ ಹಾಕಿದ್ದಾರೆ. ಜೊತೆಗೆ 7 ಗಂಟೆಯೊಳಗೆ ಒಳಗಿರುವ ಎಲ್ಲರನ್ನೂ ಖಾಲಿ ಮಾಡುವಂತೆ ಸೂಚಿಸಿದ್ದರು. ಅದರಂತೆ ಬಿಗ್‌ಬಾಸ್‌ ಟೀಂ ಎಲ್ಲಾ ಸ್ಪರ್ಧಿಗಳ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.
ಕಾರಣ ಏನು..?

ಬಿಗ್‌ಬಾಸ್‌ ಶೂಟಿಂಗ್‌ ಆಗುತ್ತಿರುವ ಜಾಲಿವುಡ್‌ನಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಅನ್ನುವ ಆರೋಪ ಇದೆ. ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಲಿರಲಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಇದೀಗ ಅಧಿಕಾರಿಗಳು ಜಾಲಿವುಡ್​​ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಡೆಟ್ ಕಂಪನಿಗೆ ಬೀಗ ಹಾಕಿದ್ದಾರೆ.

coorg buzz
coorg buzz