ಕರಾವಳಿ : ಕಳೆದ ಮೂರು ದಿನದಿಂದ ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮತ್ತೆ ಮಳೆ ಬಿರುಸುಗೊಂಡಿದೆ. ಈ ಮಳೆ ಇನ್ನೂ ಕೆಲವು ದಿನ ಮುಂದುವರೆಯುವ ಸಾಧ್ಯತೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 5ರ ತನಕ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆ ಮುಂದುವರೆಯಲಿದೆ. ಇದು ಆಗಸ್ಟ್ 31ರವರಗೆ ಸಾಗಲಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. ಈ ಜಿಲ್ಲೆಗಳಲ್ಲಿ ಆಗಸ್ಟ್ 29ರ ಮಳೆ ಬಿರುಸು ಪಡೆದಿರಲಿದೆ. ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಈಗ ಮಳೆಯಾಗುತ್ತಿದೆ.



