ಒಡಿಸ್ಸಾ : ಅಮೋಘ ಪ್ರದರ್ಶನ ನೀಡಿದ ಭಾರತ ಹಾಕಿ ತಂಡ ಏಷ್ಯಾ ಕಪ್ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಗಿದ್ದ ಕೊರಿಯಾ ವಿರುದ್ಧ 4-1 ಗೋಲುಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ನಾಲ್ಕನೇ ಬಾರಿಗೆ ಭಾರತ ಏಷ್ಯಾ ಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಪಂದ್ಯದ ಆರಂಭದಿಂದಲೇ ಬಿರುಸಿನ ಆಟಕ್ಕೆ ಮುಂದಾದ ಟೀಂ ಇಂಡಿಯಾ ಆಟಗಾರರು ಕೊರಿಯಾ ಆಟಗಾರರಿಗೆ ಪಂದ್ಯದಲ್ಲಿ ಹಿಡಿತ ಸಾಧಿಸುವುದಕ್ಕೆ ಅವಕಾಶವನ್ನೇ ಕೊಡಲಿಲ್ಲ. ಪೆನಾಲ್ಟಿ ಕಾರ್ನರ್ ಅವಕಾಶದ ಲಾಭವನ್ನೂ ಭಾರತದ ಆಟಗಾರರು ಉತ್ತಮ ರೀತಿಯಲ್ಲಿ ಬಳಸಿಕೊಂಡರು. ನಾಲ್ಕನೇ ಕ್ವಾರ್ಟರ್‌ನಲ್ಲಿ ಕೊರಿಯಾ ಪೆನಾಲ್ಟಿ ಕಾರ್ನರ್ ಅವಕಾಶ ಬಳಸಿಕೊಂಡು ಒಂದು ಗೋಲು ದಾಖಲಿಸಿತು. ಭಾರತ ಪರ ದಿಲ್‌ಪ್ರೀತ್ 02, ಅಮಿತ್ ರೊಹಿದಾಸ್ 01, ಸುಖೀತ್ 01 ಗೋಲು ಗಳಿಸಿ ಗೆಲುವಿಗೆ ನೆರವಾದರು.
ಏಷ್ಯಾ ಕಪ್ ಗೆಲ್ಲುವ ಮೂಲಕ ವಿಶ್ವಕಪ್ ಹಾಕಿ ಪಂದ್ಯಾವಳಿಗೆ ಭಾರತ ತಂಡ ನೇರ ಅರ್ಹತೆ ಗಿಟ್ಟಿಸಿಕೊಂಡಿದೆ.



