ವರದಿ : ರಜಿತ ಕಾರ್ಯಪ್ಪ
ವೀರಾಜಪೇಟೆ : ಹಿಂದೂ ಸಮಾಜದ ಸಂಘಟನೆ, ಸ್ವಾವಲಂಭಿ, ಸಂಸ್ಕಾರಯುಕ್ತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಿಂದೂ ಸಮಾಜವೇ ಒಟ್ಟುಗೂಡಿ ಹಿಂದೂ ಸಂಗಮ ಕಾರ್ಯಕ್ರಮವನ್ನು ವಿರಾಜಪೇಟೆಯಲ್ಲಿ ಆಯೋಜಿಸುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿ ವಿರಾಜಪೇಟೆ ತಾಲೂಕು ಅಧ್ಯಕ್ಷ ಕುಪ್ಪಂಡ ರಾಜೀವ್ ಕಾರ್ಯಪ್ಪ ಹೇಳಿದರು.
ಹಿಂದೂ ಸಂಗಮ ಶೋಭಾಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಸುವ ಬಗ್ಗೆ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ, ವಿರಾಜಪೇಟೆ ನಗರದ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಫೆ.25ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ವಿರಾಜಪೇಟೆ ಪಟ್ಟಣದಲ್ಲಿ ಹಿಂದು ಸಂಗಮ ಶೋಭಾಯಾತ್ರೆ ಹಾಗು ಸಭಾ ಕಾಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲೆಡೆ ಹಿಂದೂ ಧರ್ಮ, ಸಂಸ್ಕೃತಿಗಳ ಸಂರಕ್ಷಣೆ, ಸ್ವಾವಲಂಬನೆ ಮತ್ತು ಸಮಗ್ರ ವಿಕಾಸದ ದೃಷ್ಟಿಯಿಂದ ಜಾಗೃತ ಹಿಂದೂ ಸಮಾಜ ಕಟಿಬದ್ಧವಾಗಬೇಕು ಎಂಬ ಆಶಯದೊಂದಿಗೆ ಹಿಂದೂ ಸಮಾಜದ ಉತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದರು.
25 ರಂದು ಪಟ್ಟಣದ ಮೂರು ಕಡೆಗಳಿಂದ ಶೋಭಾಯಾತ್ರೆ ನಡೆಯಲಿದೆ. ಪೂರ್ವಹ್ನ 10 ಗಂಟೆಗೆ ಪಟ್ಟಣದ ತೆಲುಗುರ ಬೀದಿಯ ಮಾರಿಯಮ್ಮ ಗುಡಿಯಿಂದ ವಿವಿಧ ಸಾಂಸ್ಕøತಿಕ ಕಲಾ ತಂಡಗಳೊಂದಿಗೆ ಶೋಭಾಯಾತ್ರೆ ಪ್ರಾರಂಭಗೊಳ್ಳಲಿದೆ. ಅದೇ ಸಮಯಕ್ಕೆ ಮೀನುಪೇಟೆ ಮುತ್ತಪ್ಪ ದೇವಾಲಯದಿಂದ ಒಂದು ತಂಡ, ಪಂಜರುಪೇಟೆ ಸರ್ವೋದಯ ಕಾಲೇಜಿನಿಂದ ಮತ್ತೊಂದು ತಂಡ ಏಕಕಾಲದಲ್ಲಿ ಹೊರಡಲಿದೆ. ಮೀನುಪೇಟೆ ಶೋಭಾಯಾತ್ರೆ ಮತ್ತು ಪಂಜರುಪೇಟೆ ಶೋಭಾಯಾತ್ರೆಗಳು ಪಟ್ಟಣದ ಮಟನ್ ಮಾರ್ಕೆಟ್ ಬಳಿ ಸಮಾಗಮಗೊಳ್ಳಲಿದೆ. ಮೂರು ಕಡೆಗಳಿಂದ ಹೊರಟ ಶೋಭಾಯಾತ್ರೆ ಡೊಡಟ್ಟಿ ಚೌಕಿ ಬಳಿ ಮಹಾ ಸಂಗಮಗೊಂಡು ಎಫ್‍ಎಂಸಿ ರಸ್ತೆಯ ಮೂಲಕ ತಾಲೂಕು ಮೈದಾನದಲ್ಲಿ ಸಭೆ ಸೇರಲಿದೆ. ಅಂದಾಜು 5 ಸಾವಿರ ಹಿಂದುಗಳು ಪಾಲ್ಗೋಳ್ಳುವ ನಿರೀಕ್ಷೆ ಇದೆ. ಸಭಾ ಕಾರ್ಯಕ್ರಮದಲ್ಲಿ ಸಮಾಜದ ಮುಖ್ಯಸ್ಥರುಗಳು, ಗಣ್ಯರು ಉಪಸ್ಥಿತರಿರುತ್ತಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕøತಿಕ ಕಲಾ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಿಂದೂ ಕಾರ್ಯಕರ್ತರು ಬಂದು ಸೇರಿ ಸಹಕರಿಸುವಂತೆ ರಾಜೀವ್ ಕಾರ್ಯಪ್ಪ ಕೋರಿದರು.
ಸಂಯೋಜಕಿ ಮನೆಯಪಂಡ ಕಾಂತಿ ಸತೀಶ್ ಮಾತನಾಡಿ ಈ ಸಂಗಮ ಸಮಾವೇಶ ರಾಜಕೀಯ ಲೇಪ ಇಲ್ಲದೆ ನಡೆಯಲಿದ್ದು ಸ್ವಾಭಿಮಾನಿ ಹಿಂದುಗಳು ಮುಕ್ತವಾಗಿ ಬಾರಿ ಸಂಖ್ಯೆಯಲ್ಲಿ ಬಂದು ಸೇರಿ ಸಹಕರಿಸಿ. ಆಧ್ಯಾತ್ಮಿಕ ಜಾಗೃತಿಯನ್ನು ಮೂಡಿಸುವುದಲ್ಲದೇ ನಮ್ಮ ಧರ್ಮ, ಸಂಸ್ಕೃತಿ, ಮೌಲ್ಯಗಳನ್ನು ಆಚರಣೆಗೆ ತರುವಲ್ಲಿ ಜಾಗೃತರಾಗಬೇಕು. ಕುಟುಂಬದಲ್ಲಿ ಸಂಸ್ಕೃತಿ, ಸಂಸ್ಕಾರಗಳ ಸಂವರ್ಧನೆ, ಪರಿಸರದ ಬಗ್ಗೆ ಕಾಳಜಿ, ಸ್ವದೇಶಿ ವಸ್ತುಗಳ ಬಳಕೆ ಮತ್ತು ಜೀವನ ಪದ್ಧತಿಯ ವಿಕಾಸ, ಸಮಾಜದ ಎಲ್ಲರೊಂದಿಗೆ ಸಾಮರಸ್ಯದ ಭಾವ, ನಾಗರಿಕ ಕರ್ತವ್ಯಗಳನ್ನು ನಿತ್ಯ ಪಾಲಿಸುವುದು, ಈ ಪಂಚ ಪರಿವರ್ತನೆಯ ಅಂಶಗಳು ಸಮಾಜದಲ್ಲಿ ಅರಳಬೇಕು. ಇಂತಹ ವಾತಾವರಣ ನಿರ್ಮಾಣವಾಗುವ ಮಹತ್ತರ ಉದ್ದೇಶವನ್ನೂ ಹಿಂದೂ ಸಂಗಮವು ಹೊಂದಿದೆ ಎಂದು ತಿಳಿಸಿದರಲ್ಲದೆ ಈ ಸಂದರ್ಭ ಪಟ್ಟಣದ ಪ್ರಸಿದ್ದವಾದ ಗಣಪತಿ ದೇವಾಲಯದ ಮುಂದೆ ಸಾಂಸ್ಕøತಿಕ ನೃತ್ಯ ನಡೆಯಲಿದ್ದು ಕಾರ್ಯಕ್ರಮ ವಿಶಿಷ್ಠÀವಾಗಿ ನಡೆಯಲಿದ್ದು ಎಲ್ಲಾರು ಸಹಕಾರ ನೀಡಿ ಎಂದು ವಿನಂತಿಸಿದರು.
ಸಂಯೋಜಕ ಅಂಜಪರವಂಡ ಅನೀಲ್ ಮಂದಣ್ಣ ಮಾತನಾಡಿ, ಎಲ್ಲಾ ಹಿಂದೂ ಬಾಂಧವರು ಈ ಸಮಾಜೋತ್ಸವದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಬೇಕು. ತನ್ಮೂಲಕ ಸಮಾಜದ ಜಾಗೃತಿಯ ಈ ಕಾರ್ಯಕ್ರಮದಲ್ಲಿ ತಮ್ಮ ಪಾತ್ರವನ್ನು ಅರಿತುಕೊಳ್ಳಬೇಕು ಎಂದು ಕೋರಿದರು.
ಪಟ್ಟಡ ರೀನಾ ಪ್ರಕಾಶ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಪಂಚ ಪರಿವರ್ತನೆಯ ಅಂಶಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.



