ಮಡಿಕೇರಿ : ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆಗಸ್ಟ್ ೧೨ ರಂದು ಬೆಳಗ್ಗೆ ೯ ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಲಿದೆ. ಪ್ರಾಧಿಕಾರದ ಸಹಾಯಕ ನಿರ್ದೇಶಕರಾದ ಮಿನಿ ಉಣ್ಣಿರಾಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.



