ಮಡಿಕೇರಿ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅಕ್ಟೋಬರ್ 31 ಮತ್ತು ನವೆಂಬರ್ 01ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
31 ರಂದು ಮಧ್ಯಾಹ್ನ 03 ಗಂಟೆಗೆ ನಾಗರಹೊಳೆಯಲ್ಲಿ ಕೊಡಗು ಜಿಲ್ಲಾಡಳಿತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ‘ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಕಟ್ಟಡ ನವೀಕರಣ ಕಾಮಗಾರಿ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 05 ಗಂಟೆಗೆ ವಿರಾಜಪೇಟೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ 07 ಗಂಟೆಗೆ ಕೊಡಗು ಜಿಲ್ಲೆಯ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ನವೆಂಬರ್ 01 ರಂದು ಬೆಳಗ್ಗೆ 09 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯುವ 70ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಕೊಡಗು ಜಿಲ್ಲಾಡಳಿತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ನೂತನ ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.



