ಸೆ.12 ರವರೆಗೆ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಪ್ತಾಹ ಕಾರ್ಯಕ್ರಮ

Share this post :

ಮಡಿಕೇರಿ : ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ೨೦೨೫-೨೬ನೇ ಸಾಲಿನ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ಮತ್ತು ಕೇಂದ್ರ ಪುರಷ್ಕೃತ ಯೋಜನೆಯ “ಉಲ್ಲಾಸ್ ನವ ಭಾರತ ಸಾಕ್ಷರತಾ ಸಪ್ತಾಹ”ವನ್ನು ಸೆಪ್ಟಂಬರ್ ೦೧ ರಿಂದ ೧೨ ರವರೆಗೆ ಆಚರಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ನಾಡನ್ನಾಗಿ ಮಾಡುವ ನಿಟ್ಟಿನಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯವು ಅನಕ್ಷರಸ್ಥರಲ್ಲಿ ಅಕ್ಷರ ಜ್ಞಾನ ಮೂಡಿಸಿ ನವ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಕರ್ನಾಟಕ ಸರ್ಕಾರದ್ದಾಗಿದೆ.
ಮೂಲ ಶಿಕ್ಷಣದಿಂದ ವಂಚಿತರಾಗಿರುವವರನ್ನು ಗುರುತಿಸಿ ಅಂತವರಿಗೆ ಬುನಾದಿ ಶಿಕ್ಷಣ, ಸುಲಭ ಲೆಕ್ಕಚಾರ ಮತ್ತು ಅಕ್ಷರ ಜ್ಞಾನ ನೀಡಲು ಪ್ರಯತ್ತಿಸಲಾಗುತ್ತಿದೆ. ದಿನ ನಿತ್ಯದ ವ್ಯವಹಾರಕ್ಕಾಗಿ ಉಪಯೋಗಿಸಿಕೊಳ್ಳಬಲ್ಲ ಸಾಮರ್ಥ್ಯವನ್ನು ಹೆಚ್ಚಿಸುವುದು ಸಾಕ್ಷರತಾ ಕಾರ್ಯಕ್ರಮದ ಮೂಲ ಗುರಿಯಾಗಿದೆ. ಈ ವರ್ಷದ ಧೈಯ ವಾಕ್ಯ ‘ಬಹು ಭಾಷೆಗಳ ಮೂಲ ಸಾಕ್ಷರತೆ ಉತ್ತೇಜಿಸುವುದಾಗಿದೆ.
ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಜನ ಪ್ರತಿನಿಧಿಗಳು ಇಲಾಖಾ ಅಧಿಕಾರಿಗಳು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಸದಸ್ಯರು, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಜಿಲ್ಲೆಯ ಎಲ್ಲಾ ಸ್ವಯಂ ಸಂಸ್ಥೆಗಳು, ಶ್ರೀಶಕ್ತಿ, ಸ್ವಸಹಾಯ ಸಂಘಗಳು ಸಾಕ್ಷರತಾ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿ ಜಿಲ್ಲೆಯ ಸಾಕ್ಷರತಾ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ಯಶಸ್ವಿಗೊಳಿಸುವಂತೆ ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

coorg buzz
coorg buzz