ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಸರ್ಕಾರಿ ಶಾಲೆಗಳುಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ನೆರವಾಗಲು ಕೊಡುಗೈ ದಾನಿ, ಲಿಟಲ್ ಸ್ಕಾಲರ್ಸ್ ಅಕಾಡಮಿಯ ಮುಖ್ಯಸ್ಥರಾದ ಪೂಜಾ ರವೀಂದ್ರ ಅವರು ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಇನ್ವರ್ಟರ್ ಕೊಡುಗೆಯಾಗಿ ನೀಡಿದ್ದಾರೆ.
