ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ ೩೧ ದಿನಗಳ ಉಚಿತ ತರಬೇತಿಯು ಜುಲೈ ೨೬ ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.ಸಂ. ೯೭೪೦೯೮೨೫೮೫, ೯೨೪೧೪೮೨೫೪೧, ೯೧೧೩೮೮೦೩೨೪ ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.