ಮೈಸೂರು : ಸಾಹಿತಿ ಬಾನು ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು. ಮುಸ್ಲಿಂ ಗುರುಗಳು ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.



