ಕೊಡಗು ಜಮ್ಮಾಮಲೆ ಅಸೋಸಿಯೇಷನ್ ನಿಯೋಗದಿಂದ ಅರಣ್ಯ ಸಚಿವರ ಭೇಟಿ – ಮಲೆ ಹಿಡುವಳಿದಾರರ ಸಮಸ್ಯೆ ಬಗೆಹರಿಕೆಗೆ ಮನವಿ ಸಲ್ಲಿಕೆ…

Share this post :

ಬೆಂಗಳೂರು : ಕೊಡಗು ಜಮ್ಮಾಮಲೆ ಅಸೋಸಿಯೇಷನ್ ನೇತೃತ್ವದ ನಿಯೋಗ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ
ಮೀಸಲು ಅರಣ್ಯದಲ್ಲಿರುವ ಮಲೆ ಹಿಡುವಳಿದಾರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿತು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ  ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ನಿಯೋಗ ದಶಕಗಳಿಂದ ಈ ಭಾಗದ ಜನರನ್ನು ಕಾಡುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಗಮನಸೆಳೆಯಿತು. ಮಾನವ-ಪ್ರಾಣಿ ಸಂಘರ್ಷಕ್ಕೆ ಅಂತ್ಯ ಹಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ಈ ಸಂಬಂಧ  ಕೊಡಗು ಜಮ್ಮಾಮಲೆ ಅಸೋಸಿಯೇಷನ್ ವತಿಯಿಂದ ಹಲವು ಸಲಹೆಗಳನ್ನು ನೀಡಲಾಯಿತು. ನಿಯೋಗದಲ್ಲಿ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.