ಕಾಶ್ಮೀರದ ಪಹಲ್‍ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ (Kashmir) ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (ಟೂರ್ ಆಫರೇಟರ್ಸ್ ಮತ್ತು ಟ್ರಾವಲ್ ಏಜೆಂಟ್ಸ್) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ (Helpline) ನೀಡಬೇಕೆಂದು ಕೋರಿದೆ.
ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ 080-43344334, 080-43344335, 080-43344336 ಹಾಗೂ 080-43344342 ನ್ನು ಸಂಪರ್ಕಿಸಿ ನೀಡಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.



