ಕೆನರಾ ಬ್ಯಾಂಕ್ & ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ

Share this post :

ಸುಂಟಿಕೊಪ್ಪ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಸುಂಟಿಕೊಪ್ಪದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಪ್ರತೀವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಅನಿಕೇತ್, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವ ಮೂಲಕ ಅದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ. ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000 ರೂ.ವರೆಗಿನ ವಿಮಾ ಮೊತ್ತ ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು.
ವಾರ್ಷಿಕವಾಗಿ 436/-ರೂ ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣ ಹೊಂದಿದರೆ ಅಂಥವರ ನಾಮಿನಿಗೂ ಕೂಡ 20,0000/-ರೂ. ವಿಮಾ ಮೊತ್ತ ಸಿಗುವುದಾಗಿ ತಿಳಿಸಿದರು. ಎರಡೂ ವಿಮೆಯನ್ನು ಮಾಡಿಸಿಕೊಂಡಲ್ಲಿ 400000/-ರೂ. ಗಳ ವರೆಗಿನ ವಿಮಾ ಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು.
ಅಲ್ಲದೆ 60 ವಯಸ್ಸು ಆದ ನಂತರದಲ್ಲಿ ಪಿಂಚಣಿ ರೂಪದಲ್ಲಿ 1000 ರೂ. ಗಳಿಂದ 5000 ರೂ.ವರೆಗಿನ ಪಿಂಚಣಿ ಹಣ ಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆ ಮಾಡಿಸುವಂತೆ ತಿಳಿಸಿದರು.
ನಂತರ ಆರ್ಥಿಕ ಸಮಾಲೋಚಕರಾದ ನಬಿ, ಮಾತನಾಡಿ ಪ್ರತಿಯೊಬ್ಬರು ರೀ- ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು.
ಆರ್ಥಿಕ ಸಮಾಲೋಚಕ ಹರೀಶ್ ಸಿ.ಜಿ., ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಮುಂತಾದವರಿದ್ದರು.

coorg buzz
coorg buzz