ಮಡಿಕೇರಿ : ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಅ.24ರಂದು ನಡೆಯಬೇಕಿದ್ದ ಜಲ್‌ಜೀವನ್ ಮಿಷನ್ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
24ರಂದು ಕಿಗ್ಗಾಲು ಗ್ರಾಮದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಕಾರ್ಯಕ್ರಮ ಮುಂದೂಡಲಾಗಿದ್ದು, ಮಳೆ ಕಡಿಮೆಯಾದ ಸಂದರ್ಭದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಆ ದಿನಾಂಕವನ್ನು ಮುಂದಿನ ದಿನದಲ್ಲಿ ತಿಳಿಸಲಾಗುವುದೆಂದು ಪಂಚಾಯಿತಿ ಪ್ರಕಟಣೆ ತಿಳಿಸಿದೆ.



