ಸಿಎಂ ಸಿದ್ದರಾಮಯ್ಯನವರು (CM Siddaramaih) ದಾಖಲೆಯ 16ನೇ ಬಜೆಟ್ (Budget) ಅನ್ನು ಮಂಡಿಸಿದ್ದಾರೆ. ಬರೋಬ್ಬರಿ 4.09 ಲಕ್ಷ ಕೋಟಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಹಾಗಾದರೆ ಕೊಡಗು ಜೆಲ್ಲೆಗೆ (Kodagu) ಈ ಬಾರಿ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳು ಏನು ಎಂದು ತಿಳಿಯೋಣ.
* ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುತ್ತದೆ.
* ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುತ್ತದೆ.
* ಕೊಡಗು ಜಿಲ್ಲೆಯ ವಿರಾಜಪೇಟೆ ಪೊನ್ನಂಪೇಟೆ ಮತ್ತು ಮಡಿಕೇರಿ ತಾಲ್ಲೂಕಿನಲ್ಲಿ ಭಾರಿ ಮಳೆಯಿಂದಾಗಿ ಹಾನಿ ಒಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುವುದು.
* ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಿಂದ 7ನೇ ತರಗತಿ ಪ್ರಾರಂಭಿಸಲಾಗುವುದು.
* ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಿದ್ದಾರೆ.
* ಕೂಡಿಗೆ ಕ್ರೀಡಾ ವಸತಿ ಶಾಲೆಗೆ 3 ಕೋಟಿ ರೂ.
* ಮಲೆನಾಡು ಪ್ರದೇಶಭಿವೃದ್ಧಿ ನಿಗಮಕ್ಕೆ ನೀಡಿರುವ 83 ಕೋಟಿ ರೂ.
* ವನ್ಯಜೀವಿ ಧಾಳಿಯಿಂದ ಆಗುವ ಜೀವ ಹಾನಿ ಪರಿಹಾರವನ್ನೂ ಹೆಚ್ಚಳ,
* ಮುಖ್ಯಮಂತ್ರಿಗಳ ಪ್ರಗತಿ ಪಥ ನೂತನ ಯೋಜನೆಯಡಿಯಲ್ಲಿ ಒಟ್ಟು 8000 ಕೋಟಿ ಅನುದಾನ ಮೀಸಲಿಟ್ಟಿದ್ದು, ಅದರಲ್ಲೂ ಕೊಡಗಿಗೆ ಪಾಲು ಬರಲಿದೆ.
* ಕುಡಿಯ, ಯರವ ಮಲೆಕುಡಿಯ ಸೇರಿದಂತೆ ಹಿಂದುಳಿದ ಜನಾಂಗಗಳಿಗೆ ವಿಷೇಶ ಯೋಜನೆ.