Karnataka Budget 2026: ಸಿಎಂ ಸಿದ್ದರಾಮಯ್ಯ ಮಂಡಿಸಿದ 2026-27ರ ಬಜೆಟ್​ ಹೈಲೈಟ್ಸ್​

Karnataka Budget 2026

Share this post :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06) ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದ್ದಾರೆ. ಒಟ್ಟು 4 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್​​​ನಲ್ಲಿ ವಲಯವಾರು ವಿಂಗಡಣೆ ಮಾಡಿದ್ದಾರೆ. ಹಾಗಾದ್ರೆ, ಈ ಬಾರಿಯ ಬಜೆಟ್​​ನಲ್ಲಿ ಪ್ರಮುಖ ಮುಖ್ಯಾಂಶ ಇಲ್ಲಿದೆ.

* ವಿವಿಗಳಲ್ಲಿ ಜಾತಿ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿ.

* ಕುವೆಂಪು ವಿವಿಯಲ್ಲಿ U.R.ಅನಂತಮೂರ್ತಿ ಅಧ್ಯಯನಪೀಠ ಸ್ಥಾಪನೆ.

* ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡ ಎಂದು ಮರುನಾಮಕರಣ.

* ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 11G ಮಾದರಿ ಆರ್ಥಿಕತೆ ಘೋಷಣೆ.

* ಪ್ರಸಕ್ತ ವರ್ಷದಲ್ಲಿ 56,432 ಉದ್ಯೋಗ ನೇಮಕಾತಿ.

* ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧಿ ಹೆಸರು.

* ಅನ್ನಭಾಗ್ಯ: 5 ಕೆಜಿ ಅಕ್ಕಿ ಜೊತೆ ಇಂದಿರಾ ಕಿಟ್‌ ವಿತರಣೆ.

* ಇಂದಿರಾ ಕಿಟ್‌: ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಹೆಸರು ಕಾಳು, ಉಪ್ಪು ಒಳಗೊಂಡಿರುತ್ತದೆ.

* 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್.

* 800 ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಹಾಗೂ ಹೊಸ ಸರ್ಕಾರಿ ಶಾಲೆಗಳ ಆರಂಭ.

* ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಪುನರಾರಂಭ.

* ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಆರಂಭ.

* ಬೆಂಗಳೂರು ಮತ್ತು ಧಾರವಾಡದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಸ್ಥಾಪನೆ.

* 4.90 ಲಕ್ಷ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ನಿರ್ಧಾರ.

* ಮೈಸೂರನ್ನು ಎರಡನೇ ಐಟಿ ರಾಜಧಾನಿಯಾಗಿ ಬೆಳೆಸಲು ಉತ್ತೇಜನ.

* 38 ಲಕ್ಷ ರೈತರಿಗೆ ಸಾಲ ನೀಡಲು ₹30,000 ಕೋಟಿ ಮೀಸಲು.

* ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆ ಆರಂಭ.

* ಬೆಂಗಳೂರು ಮತ್ತು ಬೀದರ್‌ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ.

* ಪಶುಗಳ ರೋಗ ಪತ್ತೆಗಾಗಿ ಸಿಟಿ ಸ್ಕ್ಯಾನಿಂಗ್‌ ಕೇಂದ್ರ ಸ್ಥಾಪನೆ.

* 100 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ವಿಸ್ತಾರ ಯೋಜನೆ.

* ಕೃಷಿ ವೆಚ್ಚ ಕಡಿತಕ್ಕೆ ಹೈಟೆಕ್ ಹಾರ್ವೆಸ್ಟರ್ ಹಬ್ ಮತ್ತು ಕೋಲಾರದಲ್ಲಿ ರೈತ ಮಾಲ್.

* ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಭಾಗ್ಯ.

* ಬಾಣಂತಿಯರಿಗೆ ಬಿಸಿಯೂಟ ಮತ್ತು ಮರಣ ಪ್ರಮಾಣ ತಗ್ಗಿಸಲು ಕ್ರಮ.

* ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಇನ್ಸುಲಿನ್‌.

* ಕಲ್ಯಾಣ ಕರ್ನಾಟಕದಲ್ಲಿ ₹1,000 ಕೋಟಿ ವೆಚ್ಚದಲ್ಲಿ 1,124 ಕಿ.ಮೀ ಕಲ್ಯಾಣ ಪಥ.

* ರಾಜ್ಯಾದ್ಯಂತ 1,250 ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್ ಪಾಯಿಂಟ್ ಸ್ಥಾಪನೆ.

* ಬೆಂಗಳೂರು ಅಭಿವೃದ್ಧಿಗೆ ಒಟ್ಟು ₹7,000 ಕೋಟಿ ಮೀಸಲು.

* ಬೆಂಗಳೂರಿನಲ್ಲಿ 40 ಕಿ.ಮೀ ಸುರಂಗ ಮಾರ್ಗ ನಿರ್ಮಾಣ.

* ಬೆಂಗಳೂರಿನ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹಲವು ವಿಶೇಷ ಯೋಜನೆಗಳು.

* ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಚಾಲನೆ.

 

coorg buzz
coorg buzz