ಮಡಿಕೇರಿ : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಕುರಿತ ಕಾರ್ಯಾಗಾರ ಮಡಿಕೇರಿಯಲ್ಲಿ ನಡೆಯಿತು.
ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಕಾರ್ಯಾಗಾರ ಉದ್ಘಾಟಿಸಿದರು. ಮಾಸ್ಟರ್ ಟ್ರೈನರ್‌ಗಳಾದ ಪುಟ್ಟರಾಜು, ಪಂಚಾಯತಿ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶಿ ಗ್ರೇಡ್-2 ಪೂಣಚ್ಚ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಜಿಲ್ಲಾ ಪಂಚಾಯಿತಿಯ ವಿವಿಧ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗೆ ಮಾಹಿತಿ ನೀಡಿದರು.
ಜಿಪಂ ಉಪಕಾರ್ಯದರ್ಶಿ ಚಂದ್ರಶೇಖರ್ ವೇದಿಕೆಯಲ್ಲಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಗ್ರೇಡ್-1 ಗ್ರೇಡ್ -2 ಕಾರ್ಯಾಗಾರದಲ್ಲಿ ಪಾಲ್ಗೊಂಡರು.



