ನಾಳೆ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

SSLC Result

Share this post :

SSLC ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು . ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಹುಕಾತರದಿಂದ ಕಾಯುತ್ತಿರುವ ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈ ವರ್ಷದ ಪರೀಕ್ಷೆಯು ಮಾರ್ಚ್-ಏಪ್ರಿಲ್ 21, 2025 ರಿಂದ ಏಪ್ರಿಲ್ 4, 2025 ರವರೆಗೆ ನಡೆಯಿತು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ನಾಳೆ ಬೆಳಗ್ಗೆ 11-30 ಗಂಟೆಗೆ ಶಿಕ್ಷಣ ಸಚಿವರು SSLC ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12-30 ಗಂಟೆಯ ನಂತರ SSLC ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.