Karnataka SSLC Result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ… ಕೊಡಗು ಜಿಲ್ಲೆಗೆ ಎಷ್ಟನೇ ಸ್ಥಾನ?

SSLC Result

Share this post :

coorg buzz

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result) ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಕಲಬುರಗಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು 91.12% ಪಡೆದುಕೊಳ್ಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯು 89.96% ಪಡೆದುಕೊಂಡು ದ್ವಿತೀಯ ಸ್ಥಾನದಲ್ಲಿದೆ. 83.19% ಪಡೆದುಕೊಂಡ ಉತ್ತರ ಕನ್ನಡ ಮೂರನೇ ಸ್ಥಾನ, 82.29% ಪಡೆದುಕೊಂಡ ಶಿವಮೊಗ್ಗ ನಾಲ್ಕನೇ ಸ್ಥಾನ, ಕೊಡಗು 82.21% ಪಡೆದುಕೊಂಡು ಐದನೇ ಸ್ಥಾನದಲ್ಲಿದೆ.