ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಉಪಾಧ್ಯಕ್ಷ ಸ್ಥಾನ ಆಕಾಂಕ್ಷಿ ರಮೇಶ್‌ ಕುಟ್ಟಪ್ಪ ನಾಮಪತ್ರ ಸಲ್ಲಿಕೆ

Share this post :

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಜ್ಜಮಾಡ ರಮೇಶ್‌ ಕುಟ್ಟಪ್ಪ ನಾಮಪತ್ರ ಸಲ್ಲಿಸಿದ್ದಾರೆ.
2022- 25ನೇ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಇವರು ಇದೀಗ ಎರಡನೇ ಅವಧಿಗೆ ಆಕಾಂಕ್ಷಿಯಾಗಿ ಸ್ಪರ್ಧಿಸಿದ್ದಾರೆ. 25 ವರ್ಷದಿಂದ ಪತ್ರಕರ್ತ ವೃತ್ತಿಯಲ್ಲಿರುವ ಇವರು ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸಂಘಟನಾತ್ಮಕವಾಗಿಯೂ ಸಕ್ರಿಯರಾಗಿರುವ ಇವರು ಎರಡು ಅವಧಿಗೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ, ಎರಡು ಅವಧಿಗೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ, ಹಾಲಿ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಪ್ರತಿನಿಧಿ ಪತ್ರಿಕೆಯ ಸ್ಥಾನಿಕ ಸಂಪಾದಕರಾಗಿ ವೃತ್ತಿಯಲ್ಲಿದ್ದಾರೆ.

 

#kuwj #ajjamadarameshkuttappa #election

coorg buzz
coorg buzz