ಮಡಿಕೇರಿ : ಕಸ್ತೂರಿ ರಂಗನ್ ವರದಿ ವಿಚಾರವಾಗಿ ಜನ ಆತಂಕಕ್ಕೀಡಾಗಬೇಕಾದ ಅಗತ್ಯವಿಲ್ಲ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಮಡಿಕೇರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುತ್ತಿದೆ. ಕೊಡಗಿನ ಜನ ಪ್ರಕೃತಿಯನ್ನು ರಕ್ಷಿಸುವ, ಗೌರವಿಸುವ ಗುಣ ಹೊಂದಿದ್ದಾರೆ. ಜನವಸತಿ ಹಾಗೂ ಕೃಷಿ ಪ್ರದೇಶವನ್ನು ವರದಿ ವ್ಯಾಪ್ತಿಗೆ ಸೇರಿಸಬಾರದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಈ ವಿಚಾರದಲ್ಲಿ ಕಾರ್ಯನಿರ್ವಹಣೆ ಮಾಡಬೇಕೆಂದು ಅಭಿಪ್ರಾಯಪಟ್ಟರು.
ಕಸ್ತೂರಿ ರಂಗನ್ ವರದಿ ಯಥಾವತ್ ಅನುಷ್ಠಾನ ಅಸಾಧ್ಯ. ಭೌತಿಕ ಪರಿಶೀಲನೆ ನಡೆಸುವಂತೆ ಸಲಹೆ ನೀಡಲಾಗಿದ್ದು, ಇದಕ್ಕೆ ಕೇಂದ್ರ ಸಹಕರಿಸುವ ಸಾಧ್ಯತೆ ಇದೆ. ಎಂದು ಹೇಳಿದರು. ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಸುನೀಲ್ ಸುಬ್ರಹ್ಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮತ್ತಿತರರು ಇದ್ದರು.



