ಕೆ.ಎಂ.ಎ. ಕನ್ನಡ ಚೈತನ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

KMA

Share this post :

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿಶೇಷ ಶೈಕ್ಷಣಿಕ ಪುರಸ್ಕಾರವನ್ನು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರು ತಮ್ಮ ದಿವಂಗತ ತಂದೆ ದುದ್ದಿಯಂಡ ಹುಸೈನಾರ್ ಹಾಜಿ ಮತ್ತು ದಿವಂಗತ ತಾಯಿ ಆಮೀನರವರ ಸ್ಮರಣಾರ್ಥವಾಗಿ ಪ್ರಾಯೋಜಿಸಿರುವ ‘ಕೆ.ಎಂ.ಎ. ಕನ್ನಡ ಚೈತನ್ಯ ಪುರಸ್ಕಾರ-2026’ಕ್ಕೆ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಸರಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡಿ 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್. ಸಿ. ಪರೀಕ್ಷೆಯ ‘ಕನ್ನಡ ವಿಷಯ’ದಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಸಲ್ಲಿಕೆಯಾದ ಅರ್ಜಿಗಳ ಪೈಕಿ ಇಡೀ ಕೊಡಗು ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಈ ವಿಶೇಷ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುವುದು. ಅರ್ಹ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ, ಹಾಲಿ ವ್ಯಾಸಂಗ ದೃಢೀಕರಣ ಪತ್ರ ಸೇರಿದಂತೆ ತಮ್ಮ ಪೂರ್ಣ ವಿವರ, ದೂರವಾಣಿ ಸಂಖ್ಯೆ ಹಾಗು ಇತ್ತೀಚಿನ 3 ಭಾವಚಿತ್ರದೊಂದಿಗೆ ದಿನಾಂಕ 30-09-2026ರೊಳಗಾಗಿ ಅಧ್ಯಕ್ಷರು, ಕೊಡವ ಮುಸ್ಲಿಂ ಅಸೋಸಿಯೇಷನ್ (ರಿ.), ಪ್ರಧಾನ ಕಚೇರಿ, ಡಿ.ಹೆಚ್.ಎಸ್. ಕಟ್ಟಡ, ಮುಖ್ಯ ರಸ್ತೆ, ವಿರಾಜಪೇಟೆ, ಕೊಡಗು ಜಿಲ್ಲೆ, ಪಿನ್ ಕೋಡ್: 571218 ಎಂಬ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷ ಪುರಸ್ಕಾರಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳು ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಗೈರುಹಾಜರಾದಲ್ಲಿ ಅವರ ಪರವಾಗಿ ಬೇರೆಯವರಿಗೆ ಪುರಸ್ಕಾರ ಸ್ವೀಕರಿಸಲು ಅವಕಾಶ ಇರುವುದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9886060342 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

coorg buzz
WhatsApp Image 2026-08-11 at 16.11.22