ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Share this post :

ಮಡಿಕೇರಿ:- ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗುರುವಾರ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು.

ನವೆಂಬರ್, 29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

coorg buzz
coorg buzz