ಜೂನ್‌ 26 ಮತ್ತು 27 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ – ಮಳೆ ಹಾನಿ ಪ್ರದೇಶಗಳಿಗೆ ಭೇಟಿ

Share this post :

ಮಡಿಕೇರಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಎನ್.ಎಸ್. ಬೋಸರಾಜು ಜೂನ್ ೨೬ ಮತ್ತು ೨೭ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
೨೬ ರಂದು ಬೆಳಗ್ಗೆ ೧೧.೩೦ ಗಂಟೆಗೆ ಕುಶಾಲನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರುವ ವಿವಿಧ ಪ್ರದೇಶ ವೀಕ್ಷಿಸಲಿದ್ದಾರೆ. ಸಂಜೆ ೫ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಮಳೆ ಹಾನಿಯ ಕುರಿತು ಜಿಲ್ಲಾಧಿಕಾರಿ ಜೊತೆ ಚರ್ಚಿಸಲಿದ್ದಾರೆ.
೨೭ ರಂದು ಬೆಳಗ್ಗೆ ೯.೩೦ ಗಂಟೆಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ತಾಲ್ಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ೯.೪೫ ಗಂಟೆಗೆ ತಾಲ್ಲೂಕು ಆಡಳಿತ ಸೌಧ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ೧೦ ಗಂಟೆಗೆ ಕರ್ಣಂಗೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ೧೦.೩೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.