ಮಡಿಕೇರಿ:- ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.66 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 117.40 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2116.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2113.55 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.10 ಮಿ.ಮೀ. ಕಳೆದ ವರ್ಷ ಇದೇ ದಿನ 180.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3165.92 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2877.27 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 124.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1926.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1944.10 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.15 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 128.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2009.04 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2056.70 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 24.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 102.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2403.27 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2425.21 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 52 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1075.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1264.50 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:- ಮಡಿಕೇರಿ ಕಸಬಾ 34, ನಾಪೋಕ್ಲು 17.40, ಸಂಪಾಜೆ 8, ಭಾಗಮಂಡಲ 25, ವಿರಾಜಪೇಟೆ 9, ಅಮ್ಮತ್ತಿ 8.50, ಹುದಿಕೇರಿ 7.60, ಶ್ರೀಮಂಗಲ 6, ಪೊನ್ನಂಪೇಟೆ 8.00, ಬಾಳೆಲೆ 3, ಸೋಮವಾರಪೇಟೆ 30.60, ಶನಿವಾರಸಂತೆ 17, ಶಾಂತಳ್ಳಿ 40, ಕೊಡ್ಲಿಪೇಟೆ 11.60, ಕುಶಾಲನಗರ 14.80, ಸುಂಟಿಕೊಪ್ಪ 30.20 ಮಿ.ಮೀ.ಮಳೆಯಾಗಿದೆ.
ಗುರುವಾರ ದಂದು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (Meteorological Department) ಭವಿಷ್ಯ ನುಡಿದಿದೆ. ಇನ್ನು ಮುಂದಿನ ಒಂದು ವಾರ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



