ಬೀದಿ ಬದಿ ವ್ಯಾಪಾರಿಗಳೇ ಗಮನಿಸಿ…

Street vendor

Share this post :

coorg buzz

ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಸಂಪಾಜೆಯಿಂದ ಕುಶಾಲನಗರದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು ಅಲ್ಲಲ್ಲಿ ಅನಧಿಕೃತವಾಗಿ ಹಣ್ಣಿನ ಅಂಗಡಿಗಳನ್ನು ಮತ್ತು ಇತರೆ ಗೂಡಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಗ್ರಾಹಕರು ಅಂಗಡಿಗಳ ಮುಂದೆ ವಾಹನಗಳನ್ನು ನಿಲ್ಲಿಸಿಕೊಳ್ಳುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ.

ರಸ್ತೆಯಲ್ಲಿನ ವಾಹನ ನಿಲುಗಡೆಯಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯಿರುವುದರಿಂದ ಮಾರ್ಚ್, 15 ರೊಳಗೆ ಸಂಬಂಧಿಸಿದ ಬೀದಿ ಬದಿ ವ್ಯಾಪಾರಿಗಳು (Street vendor) ಅಂಗಡಿಗಳನ್ನು ತೆರವುಗೊಳಿಸಬೇಕು, ತಪ್ಪಿದ್ದಲ್ಲಿ ಮಾರ್ಚ್, 16 ರಿಂದ ಪೊಲೀಸ್ ಸಹಯೋಗದೊಂದಿಗೆ ಇಲಾಖೆಯ ವತಿಯಿಂದ ತೆರವುಗೊಳಿಸಲಾಗುವುದು. ಇದರಿಂದ ವ್ಯಾಪಾರಿಗಳಿಗೆ ನಷ್ಟವಾದಲ್ಲಿ ಇಲಾಖೆಯು ಯಾವುದೇ ರೀತಿಯಿಂದಲೂ ಜವಾಬ್ದಾರರಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರು ತಿಳಿಸಿದ್ದಾರೆ.