ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊಡಗಿನ ಯಲಿಯಂಗಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ.ಎಸ್. ಹಾಗೂ ಮುಳ್ಳೂರು ಸ.ಕಿ.ಪ್ರಾ. ಶಾಲೆಯ ಶಿಕ್ಷಕ ಶ್ರೀ ಜಾನ್ ಪೌಲ್ ಡಿಸೋಜ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಇಬ್ಬರೂ ಶಿಕ್ಷಕರಿಗೆ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಕಮಲಮ್ಮ ಹಾಗೂ ಪದಾಧಿಕಾರಿಗಳು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಸೇವೆಗೆ ಶುಭ ಹಾರೈಸಿದ್ದಾರೆ.



