ಕೊಡಗು ಗೌಡ ಸಮುದಾಯಕ್ಕೆ ಭೂಮಿ ಮಂಜೂರು: ಮುಖ್ಯಮಂತ್ರಿಗೆ ಶಾಸಕ ಪೊನ್ನಣ್ಣ ನೇತೃತ್ವದಲ್ಲಿ ಸನ್ಮಾನ

Kodagu Gowda

Share this post :

ಕೊಡಗು ಅರೆಭಾಷೆ ಗೌಡ ಸಮುದಾಯದ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿಗಾಗಿ ಮಡಿಕೇರಿ ತಾಲೂಕಿನ ಮದೆ ಗ್ರಾಮದ ಕಾಟಕೇರಿಯಲ್ಲಿ 6 ಎಕರೆ ಜಾಗವನ್ನು ಮಂಜೂರು ಮಾಡಿದ ಹಾಗೂ ಜಿಲ್ಲೆಯ ಸುದೀರ್ಘ ಕಾಲದ ‘ಜಮ್ಮಬಾಣೆ’ ಸಮಸ್ಯೆಯನ್ನು ನಿವಾರಿಸಿದ ರಾಜ್ಯ ಸರ್ಕಾರಕ್ಕೆ ಗೌರವ ಸಮರ್ಪಿಸಲಾಯಿತು.

ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಕೊಡಗು ಗೌಡ ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು.

coorg buzz
coorg buzz