ಕಡಗದಾಳು ಅಂಗನವಾಡಿಯಲ್ಲಿ LKG, UKG ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ

Share this post :

ಮಡಿಕೇರಿ : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಐಸಿಡಿಎಸ್ ಸುವರ್ಣ ಮಹೋತ್ಸವದ ಅಂಗವಾಗಿ ಸರ್ಕಾರ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸುತ್ತಿದ್ದು, ಮಡಿಕೇರಿ ತಾಲೂಕಿನ 10 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಯುಕೆಜಿ ಪ್ರಾರಂಭವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕಡಗದಾಳು ಗ್ರಾಮ ಪಂಚಾಯಿತಿಯಿಂದ 18 ಮಕ್ಕಳಿಗೆ ಸಮವಸ್ತ್ರ, ಗುರುತಿನ ಚೀಟಿ, ಪುಸ್ತಕ, ಪೆನ್ಸಿಲ್, ಬ್ಲಾಕ್ಸ್, ಚಾರ್ಟ್, ಫಜಲ್ಸ್, ಪ್ಲೇ ಮ್ಯಾಟ್ ನೀಡಲಾಗಿದೆ. ಗೋಪಾಲ್ ಪೂಜಾರಿ ಬೆಟ್ಟಗೇರಿ, ಲಾವಣ್ಯರವರು ಆಟಿಕೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು. ತರಗತಿಯನ್ನು ಉತ್ತಮವಾಗಿ ನಡೆಸುವ ನಿಟ್ಟಿನಲ್ಲಿ ಶ್ರಮವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಅನಿಲ ಕೆ.ಆರ್., ಸಹಾಯಕಿ ಹೇಮಲತಾ ಬಿ.ಎಂ. ಅವರಿಗೆ ಅಭಿನಂದನೆ ಸಲ್ಲಿಸಿದರು.

ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ಕಲ್ಮೇಶ್ ವಿಶ್ವ ಜನಸಂಖ್ಯಾ ದಿನದ ಕುರಿತು ಮಾಹಿತಿ ನೀಡಿದರು. ಮಳೆಗಾಲದಲ್ಲಿ ಬರುವಂತಹ ಸಾಂಕ್ರಾಮಿಕ ರೋಗಗಳು, ಆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ನಿವೃತ್ತ ಸಹಾಯಕಿ ಕಮಲ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು.

ಅಂಗನವಾಡಿ ಪುಟಾಣಿಗಳು ಪ್ರಾರ್ಥಿಸಿದರು. ಅನಿಲ ಕೆ.ಆರ್. ಸ್ವಾಗತಿಸಿದರು. ಕಾರ್ಯಕರ್ತೆ ಸಾಜಿದಾ ವಂದಿಸಿದರು. ಪಂಚಾಯಿತಿ ಅಧ್ಯಕ್ಷೆ ನಿರ್ಮಲ, ಉಪಾಧ್ಯಕ್ಷ ಯೋಗೀಶ್‌, ಸದಸ್ಯರಾದ ಶಂಭಯ್ಯ, ಆನಂದ, ಭಾರತಿ, ಗೀತಾ, ಇನ್ನರ್ ವೀಲ್ ಸಂಸ್ಥೆಯ ಶಮ್ಮಿ ಪ್ರಭು, ಪಿಎಚ್‌ಸಿಒ ಕೀರ್ತನ, ಆಶಾ ಕಾರ್ಯಕರ್ತೆಯರಾದ ನೀಲಾವತಿ, ಶೋಭಾ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾ, ಅಂಗನವಾಡಿ ಕಾರ್ಯಕರ್ತೆ ಅಶ್ವಿತ, ಪೋಷಕರು ಈ ಸಂದರ್ಭ ಇದ್ದರು.

coorg buzz
coorg buzz