ಮಡಿಕೇರಿ ನಗರಸಭೆಗೆ ಲೋಕಾಯುಕ್ತ ದಿಢೀರ್‌ ದಾಳಿ..!

Share this post :

ಮಡಿಕೇರಿ : ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ.
ನಗರಸಭೆಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ವಿಳಂಬವಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ದಿಢೀರ್‌ ದಾಳಿಯಾಗಿದೆ. ನಗಸಭೆಯ ವಿವಿಧ ವಿಭಾಗದ ಕಚೇರಿಗಳಿಗೆ ದಾಳಿ ನಡೆಸಿದ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ನಗರಸಭೆ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

coorg buzz
coorg buzz