ಲಾರಿ & ಕಾರು ಮುಖಾಮುಖಿ ಡಿಕ್ಕಿ – ಕಾರಿನಲ್ಲಿದ್ದ ನಾಲ್ವರು ದುರ್ಮರಣ..!

Share this post :

coorg buzz

ಸಂಪಾಜೆ : ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ಕೊಯನಾಡು ಬಳಿ ಸಂಭವಿಸಿದೆ.
ಮಂಗಳೂರಿನಿಂದ ಮಡಿಕೇರಿ ಕಡೆ ಬರುತ್ತಿದ್ದ ಲಾರಿಗೆ ಮಡಿಕೇರಿ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿರುವ ಮಾರ್ಗದಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರು ಕೊಡಗು ಜಿಲ್ಲೆಯ ಗೋಣಿಕೊಪ್ಪ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು ಮೃತ ದುರ್ದೈವಿಗಳು. ಮೃತದೇಹಗಳನ್ನು ಸುಳ್ಯದ ಆಸ್ಪತ್ರೆಯಲ್ಲಿ ಇಡಲಾಗಿದೆ.

ಮಧ್ಯಾಹ್ನ 12.50 ಗಂಟೆ ಸುಮಾರಿನಲ್ಲಿ ಮಡಿಕೇರಿಯಿಂದ ಸುಳ್ಯದ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ.ಸಂಪಾಜೆಯ ಶರತ್ ಕೀಲಾರು, ತಾಜುದ್ದೀನ್ ಸೇರಿದಂತೆ ಯುವಕರ ತಂಡ ನಾಲ್ಕು ಆಂಬ್ಯುಲೆನ್ಸ್ ನಲ್ಲಿ ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟೊತ್ತಿಗಾಗಲೇ ನಾಲ್ವರೂ ಮೃತಪಟ್ಟಿದ್ದಾರೆ.