ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆ ದಶಮಂಟಮಗಳ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಮಡಿಕೇರಿ ನಗರದಾದ್ಯಂತ ಕೈಗೊಂಡಿರುವ ಕ್ರಮಗಳ ಬಗ್ಗೆ ಶಾಸಕ ಡಾ. ಮಂತರ್ ಗೌಡ ಪರಿಶೀಲನೆ ನಡೆಸಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರ ಜೊತೆ ವಿವಿಧ ಪ್ರದೇಶಗಳಿಗೆ ತೆರಳಿ ವಾಹನ ನಿಲುಗಡೆ ವ್ಯವಸ್ಥೆ, ಸುಗಮ ಸಂಚಾರ ವ್ಯವಸ್ಥೆ ಹಾಗೂ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.



