ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿರುವ ವಿವಿಧ ಔಷಧ ಅಂಗಡಿಗಳಿಗೆ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದಕ ವಸ್ತುಗಳ ನಿಯಂತ್ರಣದ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಅಂಗಡಿ ಮಾಲೀಕರಿಗೆ ಕಾನೂನು ಪಾಲಿಸುವಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ.
ಮಾದಕ ವಸ್ತುಗಳ ಮಾರಾಟ ತಡೆಗಟ್ಟುವ ಸರ್ಕಾರದ ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಔಷಧ ಮಳಿಗೆಯಲ್ಲೂ ಕಡ್ಡಾಯವಾಗಿ “ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧಿ ಮಾರಾಟ ಮಾಡಲಾಗುವುದಿಲ್ಲ” ಎಂಬ ಸ್ಪಷ್ಟ ಸೂಚನಾ ಫಲಕವನ್ನು ಅಳವಡಿಸಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿದರು ಹಾಗೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಲೀಕರಿಗೆ ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಔಷಧ ಅಂಗಡಿಗಳ ಮಾಲೀಕರಿಗೆ ಯಾವುದೇ ಕಾರಣಕ್ಕೂ ನಿಷೇಧಿತ ಹಾಗೂ ಅವಧಿ ಮುಗಿದ ಔಷಧಿಗಳನ್ನು ಗ್ರಾಹಕರಿಗೆ ಮಾರಾಟ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.



