ಮಡಿಕೇರಿ : ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿಯಾಗಿ ಸಭೆ ನಡೆಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಸಲ್ಲಿಸಿದರು. ನಂತರ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಯೋಜನಾ ವರದಿ ತಯಾರಿ ಮಾಡಿ ವರದಿ ಸಲ್ಲಿಸುವಂತೆ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಸದಸ್ಯರಾದ ಜಿ. ರಾಜೇಂದ್ರ, ನಿರಂಜನ್ ಎಂ.ಎ., ಪ್ರಕಾಶ ಆಚಾರ್ಯ, ಅಂಬೇಕಲ್ ಕುಶಾಲಪ್ಪ, ಅರ್ಚಕರಾದ ಸಂತೋಷ್ ಭಟ್, ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಉಪಸ್ಥಿತರಿದ್ದರು.



