ಮಡಿಕೇರಿ ತಾಲೂಕು ಬಂಟರ ಸಂಘದ ವತಿಯಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅ.26ಕ್ಕೆ

Share this post :

ಮಡಿಕೇರಿ : ಮಡಿಕೇರಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಅ.26ರಂದು ನಡೆಯಲಿದೆ.
ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ತಾಲೂಕು ಮಹಿಳಾ ಘಟಕ, ಯುವ ಬಂಟ್ಸ್‌ ಅಸೋಸಿಯೇಷನ್‌, ನಗರ ಬಂಟರ ಸಂಘ, ನಗರ ಮಹಿಳಾ ಘಟಕ, ವಿರಾಜಪೇಟೆ, ಸೋಮವಾರಪೇಟೆ ತಾಲೂಕು ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಶೈಕ್ಷಣಿಕವಾಗಿ ಸಾಧನೆಗೈದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

coorg buzz
WhatsApp Image 2026-08-11 at 16.11.22