ಶಿವರಾತ್ರಿ ಪ್ರಯುಕ್ತ ಮುತ್ತಪ್ಪ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ

Share this post :

ವೀರಾಜಪೇಟೆ : ವೀರಾಜಪೇಟೆಯ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಮಹಾ ಶಿವರಾತ್ರಿಯ ಅಂಗವಾಗಿ ಮೀನುಪೇಟೆಯ ಚೈತನ್ಯ ಮಡಪ್ಪುರ ಶ್ರೀ ಮುತ್ತಪ್ಪ ದೇವಸ್ಥಾನದ ಆವರಣದಲ್ಲಿರುವ ಶ್ರೀ ಮುತ್ತಪ್ಪ ಕಲಾ ಮಂಟಪದಲ್ಲಿ ಮಹಾ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿದೆ.
ಪೂಜೆಗೆ ಬರುವಾಗ ಎರಡು ಬಾಳೆ ಎಲೆ, ಹೂವು ಹಾಗೂ ದೀಪ ತರಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಮುತ್ತಪ್ಪ ಮಲಯಾಳಿ ಸಂಘದ ಅಧ್ಯಕ್ಷ ಸುಮೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

coorg buzz
coorg buzz