ಮುಂಬೈ : ಮಾಲೆಗಾಂವ್ ಸ್ಪೋಟಕ್ಕೆ (Malegaon blast) ಸಂಬಂಧಿಸಿದಂತೆ ಮುಂಬೈನ ಎನ್‌ಐಇ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಎಲ್ಲಾ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿನ ಮಸೀದಿ ಬಳಿ 2008ರ ಸೆಪ್ಟೆಂಬರ್ 29 ರಂದು ಬಾಂಬ್ ಸ್ಪೋಟವಾಗಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿರುವ ನ್ಯಾಯಾಲಯ 07 ಆರೋಪಿಗಳ ವಿರುದ್ಧ ಅರೋಪ ಸಾಬೀತಾಗದ ಹಿನ್ನೆಲೆಯಲ್ಲಿ ನಿರ್ದೋಷಿಗಳೆಂದು ತೀರ್ಪು ನೀಡಿದೆ.
ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್(ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ(ನಿವೃತ್ತ), ಸುಧಾಕರ್ ಚತುರ್ವೇದಿ, ಅಜಯ್ ರಹೀರ್ಕರ್, ಸುಧಾಕರ್ ಧರ್‌ದ್ವಿವೇದಿ ಅಲಿಯಾಸ್ ಶಂಕರಾಚಾರ್ಯ ಹಾಗೂ ಸಮೀರ್ ಕುಲಕರ್ಣಿ ಅವರ ವಿರುದ್ಧ ಆರೋಪವಿತ್ತು. ಅಂದು ನಡೆದ ಸ್ಪೋಟದಲ್ಲಿ 06 ಮಂದಿ ಪ್ರಾಣ ಕಳೆದುಕೊಂಡಿದ್ದರು. ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.



