ಪೊನ್ನಂಪೇಟೆ : ಕ್ರೀಡಾ ಕ್ಷೇತ್ರದ ಸಾಧನೆಗಾಗಿ ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ಎಂ. ಮನೋಜ್ ಅವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಹೀಗಾಗಿ ಬಿರ್ಸಾ ಮುಂಡರವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಗಿರಿಜನ ಹಾಡಿಯಲ್ಲಿ ಹುಟ್ಟಿ ಬೆಳೆದು, ಪ್ರಸ್ತುತ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.



