ಮರಾಠ, ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Marata

Share this post :

ಮಡಿಕೇರಿ: ಕೊಡಗು (Kodagu) ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ೨೯ನೇ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.೮ ರಂದು ನಡೆಯಲಿದೆ. ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಬೆಳಿಗ್ಗೆ ೯ ಗಂಟೆಗೆ ಸಭೆ ನಡೆಯಲಿದೆ.

ಸಭೆಯನ್ನು ಕರ್ನಾಟಕ ಮಾರಾಟಿ ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯ್ಕ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎA.ಪರಮೇಶ್ವರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಟಿ.ನಾರಾಯಣ, ಮರಾಠ-ಮರಾಟಿ ಸಮಾಜ ಸೇವಾ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಕೃಷಿಕ ಎಂ.ಟಿ.ಚೆನಿಯಪ್ಪ ನಾಯ್ಕ, ಉಪಾಧ್ಯಕ್ಷರಾದ ಜಿ.ಆರ್.ದೇವಕಿ ನಾಯ್ಕ, ಮಡಿಕೇರಿ ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್, ಮಹಿಳಾ ವೇದಿಕೆ ಅಧ್ಯಕ್ಷರಾದ ರತ್ನ ಮಂಜರಿ ನರಸಿಂಹ, ಕಟ್ಟಡ ಸಮಿತಿ ಅಧ್ಯಕ್ಷ ಎಂ.ಟಿ.ಗುರುವಪ್ಪ, ಉಪಸಮಿತಿ ಅಧ್ಯಕ್ಷ ಹೆಚ್.ಕೆ.ಹೊನ್ನಪ್ಪ, ಧನಂಜಯ, ಎಂ.ಎಸ್.ವೆAಕಪ್ಪ ಹಾಗೂ ನಿರಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.

ಪತ್ರಿಭಾ ಪುರಸ್ಕಾರ
ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ ಪ್ರೋತ್ಸಾಹಿಸಲಾಗುವುದು. ೨೦೨೩-೨೪ನೇ ಸಾಲಿನಲ್ಲಿ ೭ನೇ ತರಗತಿ, ೧೦ನೇ ತರಗತಿ, ಅಂತಿಮ ಪದವಿ ಪೂರ್ವ, ಅಂತಿಮ ಪದವಿ ಪರೀಕ್ಷೆಯಲ್ಲಿ ಕೊಡಗಿನಲ್ಲಿ ವ್ಯಾಸಂಗ ಮಾಡಿರುವ ಮತ್ತು ವೃತ್ತಿಪರ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲೆಯ ಹೊರಗೆ ವ್ಯಾಸಂಗ ಮಾಡಿ ಅತೀ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಅರ್ಹ ವಿದ್ಯಾರ್ಥಿಗಳು ೯೪೪೯೮೫೫೩೪೫, ೯೪೮೦೯೮೭೮೭೦ ಸಂಖ್ಯೆಯನ್ನು ಸಂಪರ್ಕಿಸುವAತೆ ಸಂಘದ ಅಧ್ಯಕ್ಷ ಎಂ.ಎA.ಪರಮೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

coorg buzz
coorg buzz