ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬಳಿ ಮಂಗಳವಾರ ಬೆಳಗ್ಗೆ ಲಘು ಭೂಕಂಪನ ಅನುಭವವಾಗಿದೆ. ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹಾನಿ, ಸಾವು-ನೋವು ಸಂಭವಿಸಿಲ್ಲ. ಮಡಿಕೇರಿಯ (Madikeri) ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 1.6 ಮ್ಯಾಗ್ನಿಟ್ಯೂಡ್ ತೀವ್ರತೆಯ ಭೂಕಂಪ ಬೆಳಿಗ್ಗೆ ಗಂಟೆ 10:49:05 ಕ್ಕೆ ಸಂಭವಿಸಿದೆ.
ಭೂಕಂಪ ಆಗಲು ಬೇರೆ ಬೇರೆ ಕಾರಣಗಳಿವೆ. ಭೂಕಂಪಗಳನ್ನು ಅಳೆಯಲು ರಿಕ್ಟರ್ ಮಾಪಕವನ್ನು ಬಳಸಲಾಗುತ್ತದೆ. ರಿಕ್ಟರ್ ಮಾಪಕದ ಮಾಪನ 1 ರಿಂದ 9 ರವರೆಗೆ ಇರುತ್ತದೆ. 1.6 ಎಂದರೆ ಕಡಿಮೆ ತೀವ್ರತೆಯ ಸೂಚನೆಯಾಗಿದೆ. ಸಾಮಾನ್ಯವಾಗಿ ರಿಕ್ಟರ್ ಮಾಪಕದಲ್ಲಿ 6ಕ್ಕಿಂತ ಹೆಚ್ಚಿನ ತೀವ್ರತೆ ವರದಿಯಾದರೆ ಭೀಕರ ಭೂಕಂಪ ಎಂದು ಪರಿಗಣಿಸಲಾಗುತ್ತದೆ. ಭೂಕಂಪದ ತೀವ್ರತೆಯನ್ನು ಅದರ ಕೇಂದ್ರದಿಂದ ಅಳೆಯಲಾಗುತ್ತದೆ.