ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ಗೆ ಅವಾಚ್ಯ ಶಬ್ದಗಳಿಂದ ವ್ಯಕ್ತಿಯೊಬ್ಬರು ನಿಂದಿಸಿದ್ದಾರೆಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಸ್ಪಿ ಕೆ. ರಾಮರಾಜನ್ ಅವರಿಗೆ ದೂರು ನೀಡಲಾಯಿತು.
ಇತ್ತೀಚೆಗೆ ಸಂತೋಷ್ ಲಾಡ್ ಕೊಡಗು ಜಿಲ್ಲೆಗೆ ಸಂತೋಷ್ ಲಾಡ್ ಭೇಟಿ ನೀಡಿದ ಸಂದರ್ಭದ ಫೋಟೋವನ್ನು ಶಾಸಕ ಎ.ಎಸ್. ಪೊನ್ನಣ್ಣ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ವ್ಯಕ್ತಿಯೊಬ್ಬರು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಯುವ ಕಾಂಗ್ರೆಸ್ ನೇತೃತ್ವದಲ್ಲಿ ಎಸ್ಪಿ ಕೆ. ರಾಮರಾಜನ್ ಅವರಿಗೆ ದೂರು ನೀಡಿದೆ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಪ್ರಧಾನ ಕಾರ್ಯದರ್ಶಿ ಹಕೀಮ್, ಉಪಾಧ್ಯಕ್ಷ ರಾಹುಲ್ ಮಾರ್ಷಲ್, ವಿರಾಜಪೇಟೆ ವಿಧಾನಸಭಾ ಅಧ್ಯಕ್ಷ ರಕ್ಷಿತ್ ಚಂಗಪ್ಪ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕವನ್ ಕೊತ್ತೋಳಿ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಹಂಸು, ಜಿಲ್ಲಾ ಉಪಾಧ್ಯಕ್ಷ ಕೋಣಿಯಂಡ ಮುತ್ತಣ್ಣ ಮುಂತಾದವರಿದ್ದರು.



