ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಎ.ಎಸ್.ಪೊನ್ನಣ್ಣ ತಮ್ಮ 51ನೇ ಜನ್ಮದಿನದಂದು ಪತ್ನಿ ಕಾಂಚನ ಅವರೊಂದಿಗೆ ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಅಭಿವೃದ್ಧಿ,ನೆಮ್ಮದಿ,ಸಮೃದ್ದಿ ತರುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.