ಜೂ.11 ರಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಕೊಡಗು ಜಿಲ್ಲಾ ಪ್ರವಾಸ

Share this post :

ಮಡಿಕೇರಿ  : ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಜೂನ್, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಜೂನ್, 11 ರಂದು ಬೆಳಗ್ಗೆ 10.45 ಗಂಟೆಗೆ ಕುಶಾಲನಗರದ ಇಂದಿರಾ ಕ್ಯಾಂಟೀನ್ ಭೇಟಿ ಹಾಗೂ ಪರಿಶೀಲನೆ ಮಾಡಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ನಗರಾಭಿವೃದ್ದಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ‘ನೂತನ ಪುರಸಭಾ ಕಚೇರಿ ಕಟ್ಟಡ’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಳಿಕ ಮಧ್ಯಾಹ್ನ 12.45 ಗಂಟೆಗೆ ಕೊಡಗು ಜಿಲ್ಲೆಯ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ‘ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ನಂತರ ಮಧ್ಯಾಹ್ನ 3 ಗಂಟೆಗೆ ಪೌರಾಡಳಿತ ಮತ್ತು ಹಜ್ ಸಚಿವರ ಅಧ್ಯಕ್ಷತೆಯಲ್ಲಿ ಮೈಸೂರು ವಿಭಾಗದ ನಗರೋತ್ಥಾನ 3 ಮತ್ತು 4 ಹಾಗೂ ಇತರೆ ಯೋಜನೆಗಳ ಕುರಿತು’ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ತಿಳಿಸಿದ್ದಾರೆ.

coorg buzz
coorg buzz