ಸುಂಟಿಕೊಪ್ಪದಲ್ಲಿ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವರ ತೆರೆ – ಮಾ. 22ರಿಂದ ಹಲವು ಕಾರ್ಯಕ್ರಮ

Share this post :

ಸುಂಟಿಕೊಪ್ಪ : ಇಲ್ಲಿನ ಶ್ರೀ ಚಾಮುಂಡೇಶ್ವರಿ(Chamundeshwari) ಮತ್ತು ಶ್ರೀ ಮುತ್ತಪ್ಪ(Mutthappa) ದೇವಸ್ಥಾನ ಸಮಿತಿಯ ಆಶ್ರಯದಲ್ಲಿ  22-03-2025 ರಿಂದ 24-03-2025ರವರೆಗೆ 57ನೇ ವರ್ಷದ ತೆರೆ ಮಹೋತ್ಸವ ಏರ್ಪಡಿಸಲಾಗಿದೆ.
22-03-2025 ರಂದು ಬೆಳಗ್ಗೆ 6.30 ಗಂಟೆಗೆ ಶ್ರೀ ಗಣಪತಿ ಹವನ, 7.15 ಗಂಟೆಗೆ ಶುದ್ಧಿ ಪುಣ್ಯಾಹ ಪೂಜೆ ನೆರವೇರಲಿದೆ ಮತ್ತು 7.30 ಗಂಟೆಗೆ ಬಾವುಟ ಏರಿಸಲಾಗುವುದು. ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, 6 ಗಂಟೆಗೆ ಚಂಡೆ ಮೇಳ ಮತ್ತು ರಾತ್ರಿ 7 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಲಿದೆ.
23-03-2025 ರಂದು ಬೆಳಿಗ್ಗೆ 7 ಗಂಟೆಗೆ ವಾದ್ಯಮೇಳ, 11 ಗಂಟೆಗೆ ಶ್ರೀ ಶಾಸ್ತಪ್ಪನ ವೆಳ್ಳಾಟಂ, ಮಧ್ಯಾಹ್ನ 1 ಗಂಟೆಗೆ ಶ್ರೀ ಗುಳಿಗನ ವೆಳ್ಳಾಟಂ, 4 ಗಂಟೆಗೆ ಅಡಿಯರ ಮೆರವಣಿಗೆ ಏರ್ಪಡಿಸಲಾಗಿದೆ.  ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನದಿಂದ ಉತ್ಸವ ಮೂರ್ತಿಯನ್ನು ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿರಿಸಿ ಚಂಡೆಮೇಳದೊಂದಿಗೆ ಹೊರಟು, ಬಾಳೆಕಾಡಿನ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನದಿಂದ ಕಳಸ ಹಾಗೂ ಮಂಟಪದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ದೇವಸ್ಥಾನಕ್ಕೆ ಹಿಂತಿರುಗಲಾವುದು.

ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಅನ್ನ ಪ್ರಸಾದ ವಿನಿಯೋಗ ನಡೆಯಲಿದೆ. ಅಂದು ರಾತ್ರಿ 7 ಗಂಟೆಗೆ ಮುತ್ತಪ್ಪ ವೆಳ್ಳಾಟಂ, 8 ಗಂಟೆಗೆ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ ಚಾಮುಂಡಿ ವೆಳ್ಳಾಟಂ, 8.30 ಗಂಟೆಗೆ ಶ್ರೀ ವಸೂರಿಮಾಲೆ ಸ್ನಾನಕ್ಕೆ ಹೊರಡುವುದು, ರಾತ್ರಿ 9 ಗಂಟೆಗೆ ವಿಷ್ಣುಮೂರ್ತಿ ವೆಳ್ಳಾಟಂ, 11 ಗಂಟೆಗೆ ಕಳಿಗ ಪಾಟ್ ಅಂದಿ ಮೇಳ ಕಳಸಂ ಸ್ವೀಕರಿಸುವುದು, ವೆಳ್ಳಕಟ್ಟ್, 1.15ಕ್ಕೆ ಶ್ರೀ ಗುಳಿಗನ ಕೋಲ, 2 ಗಂಟೆಗೆ ಶ್ರೀ ಶಾಸ್ತಪ್ಪನ ಕೋಲ, ಬೆಳಗಿನ ಜಾವ 4 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪನ ದೇವರ ಕೋಲ ನೆರವೇರಲಿದೆ.
24-03-2025 ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಚಾಮುಂಡೇಶ್ವರಿ ಕೋಲ, 8 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ಪಳ್ಳಿವೇಟ, 9 ಗಂಟೆಗೆ ಶ್ರೀ ವಿಷ್ಣುಮೂರ್ತಿ ಕೋಲ, 10 ಗಂಟೆಗೆ ಶ್ರೀ ಚಾಮುಂಡೇಶ್ವರಿ ಕೋಲ, 11 ಗಂಟೆಗೆ ವಸೂರಿಮಾಲೆ ಕೋಲ, ಮಧ್ಯಾಹ್ನ 12 ಗಂಟೆಗೆ ಗುರುಶ್ರೀ ದರ್ಪಣ, 2 ಗಂಟೆಗೆ ಬಾವುಟ ಇಳಿಸಲಾಗುವುದು ಎಂದು ಸಮಿತಿ ಪ್ರಕಟಣೆ ತಿಳಿಸಿದೆ.