ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕಾರ್ಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ ರವರ ಭರತನಾಟ್ಯದಲ್ಲಿನ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಲತಾ ಎಸ್ ಮುಳ್ಳೂರ,ಲೇಖಕರು ನಟ ನಿರ್ದೇಶಕರಾದ ಡಾ. ಕೆಂಚನೂರು ಶಂಕರ ಮೊದಲಾದವರು ಉಪಸ್ಥಿತರಿದ್ದರು. ಲಾವಣ್ಯ ಬೋರ್ಕಾರ್ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ನ ಗುರುಗಳಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ರವರ ಶಿಷ್ಯೆಯಾಗಿದ್ದಾಳೆ ಹಾಗೂ ವಿರಾಜಪೇಟೆ ಬೇಟೋಳಿ ರಾಮನಗರದ ನಾಟಿ ವೈದ್ಯರು ಮತ್ತು ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘದ ಅಧ್ಯಕ್ಷರಾದ ಬಿ. ಜಿ. ನಟರಾಜ್ ಬೋರ್ಕಾರ್ ಹಾಗೂ ಸುನಂದ ಬೋರ್ಕಾರ್ ದಂಪತಿಗಳ ಪುತ್ರಿ.



