ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆ – ಮಳೆ ರಜೆ ನಡುವೆಯೂ ಪ್ರಬಂಧ, ಚಿತ್ರಕಲಾ ಸ್ಪರ್ಧೆ!

Share this post :

ಮಡಿಕೇರಿ : ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರೌಢಶಾಲೆ ಹಾಗೂ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯು ಬುಧವಾರ ನಡೆಯಿತು.
‘ನಮ್ಮ ಬೆಂಗಳೂರು ಹೇಗೆ ಇದ್ದರೆ ಚೆನ್ನ’ ಹಾಗೂ ‘ನಾಡಪ್ರಭು ಕೆಂಪೇಗೌಡರ ಕೊಡುಗೆ’ ಕುರಿತು ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ಇಂದು ಮಳೆ ಕಾರಣದಿಂದ ರಜೆ ಇದ್ದದ್ದಕ್ಕಾಗಿ ಸ್ಪರ್ಧೆಯಲ್ಲಿ ಬೆರಳೆಣಿಕೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನು ಸದಾ ಸ್ಮರಿಸಬೇಕು. ಅವರ ದೂರ ದೃಷ್ಟಿಯಿಂದ ಹಿಂದೆಯೇ ಬೆಂಗಳೂರು ಅಭಿವೃದ್ಧಿಯತ್ತ ಸಾಗಿತ್ತು. ಕೆರೆ ಕಟ್ಟೆಗಳ ನಿರ್ಮಾಣ, ಮರಗಿಡಗಳನ್ನು ಬೆಳೆಸಿ ಪರಿಸರ ಶುಚಿತ್ವಕ್ಕೆ ಒತ್ತು ನೀಡಿದ್ದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಬಿಂದು, ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಮಣಜೂರು ಮಂಜುನಾಥ್ ಈ ಸಂದರ್ಭ ಇದ್ದರು.

coorg buzz
WhatsApp Image 2026-08-11 at 16.11.22